ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ (Karnataka Rain) ನಿರೀಕ್ಷೆಯಿದೆ. ನ.11ರಂದು ಸೋಮವಾರ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ನ.12ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನ.13ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ.
ನ.14ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ನ.16ರವರೆಗೆ ಇರಲಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) November 10, 2024
ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.#KSNDMC pic.twitter.com/z3PUis0ifF
ನ.12ರ ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಒಣ ಹವೆ ತುಂಬಾ ಸಾಧ್ಯತೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು ಹೆಚ್ಚಾಗಿ ಕಂಡುಬರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 19 ° C ಆಗಿರಬಹುದು.
ಈ ಸುದ್ದಿಯನ್ನೂ ಓದಿ | J&K Encounter: ಕಣಿವೆ ರಾಜ್ಯದಲ್ಲಿ ಸೇನೆಯಿಂದ ಭರ್ಜರಿ ಬೇಟೆ; ವಿಲೇಜ್ ಡಿಫೆನ್ಸ್ ಗಾರ್ಡ್‌ಗಳ ಹತ್ಯೆಗೈದಿದ್ದ ಉಗ್ರರು ಟ್ರ್ಯಾಪ್!