Saturday, 23rd November 2024

Karnataka Rain: ನಾಳೆ ಉತ್ತರ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ

Karnataka Rain

ಬೆಂಗಳೂರು: ಕಳೆದೆರಡು ದಿನಗಳಿಂದ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಮಳೆಯಾಗಿದೆ. ಇನ್ನು ಅ.10ರಂದು ಗುರುವಾರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತ ಹವಾಮಾನ ಇಲಾಖೆ (Karnataka Rain) ಮುನ್ಸೂಚನೆ ನೀಡಿದೆ.

ಇನ್ನು ಅ.11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬಾಗಲಕೋಟೆ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ. 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಅ.13ರಂದು ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.15ರವರೆಗೆ ಮುಂದುವರಿಯಲಿದೆ.

ಈ ಸುದ್ದಿಯನ್ನೂ ಓದಿ | Flower and Fruits Price: ವಿಜಯದಶಮಿಗೆ ಕೌಂಟ್ ಡೌನ್ ಆರಂಭ; ಹಬ್ಬಕ್ಕೆ ಹೂವು-ಹಣ್ಣು ಬಲು ದುಬಾರಿ!

ಅ.11 ಬೆಳಗ್ಗೆ ವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.