Tuesday, 10th December 2024

Karnataka Rain: ನಾಳೆ ಚಿಕ್ಕಮಗಳೂರು, ಕೊಡಗು ಸೇರಿ ವಿವಿಧೆಡೆ ಭರ್ಜರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rain

ಬೆಂಗಳೂರು: ನ.13ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ (Karnataka Rain). ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧ್ಯತೆಯಿದೆ.

ಇನ್ನು ನ.14ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ, ಚಾಮರಾಗನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನ.15ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ನ.16ರಂದು ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ನ.18ರವರೆಗೆ ಮುಂದುವರಿಯುವ ಸಾಧ್ಯತೆ ಇದೆ.

ನ.14ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ° C ಮತ್ತು 21 ° C ಆಗಿರಬಹುದು.

ಈ ಸುದ್ದಿಯನ್ನೂ ಓದಿ | Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 °C ಮತ್ತು 21 ° C ಆಗಿರಬಹುದು.