ಬೆಂಗಳೂರು: ಅ.25ರಂದು ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ(Karnataka Rain) ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಅ.26ರಂದು ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.
ಅ.27ರಂದು ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಅ.28ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳ ಕರ್ನಾಟಕದ ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಅ.29ರಂದು ರಾಜ್ಯದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ.30ರಂದು ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅ.26ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ° C ಮತ್ತು 20 ° C ಆಗಿರಬಹುದು.
ಈ ಸುದ್ದಿಯನ್ನೂ ಓದಿ | R Ashok: ಬೆಂಗಳೂರು ಕಟ್ಟಡ ದುರಂತಕ್ಕೆ ರಾಜ್ಯ ಸರ್ಕಾರದ ದುರಾಡಳಿತ ಕಾರಣ; ಆರ್. ಅಶೋಕ್ ಆರೋಪ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.