Friday, 25th October 2024

Karnataka Rain: ನಾಳೆ ಕೊಡಗು, ಹಾಸನ ಸೇರಿ ರಾಜ್ಯದ ವಿವಿಧೆಡೆ ಹಗುರ ಮಳೆ

Karnataka Rain

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಅಬ್ಬರಿಸಿದ್ದ ವರುಣ ಶುಕ್ರವಾರ ಕೊಂಚ ಬಿಡುವು ನೀಡಿದ್ದಾನೆ. ಇನ್ನು ಅ.26ರಂದು ಶನಿವಾರ ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.27ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಅ.28ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಅ.29ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ,
ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಅ.30ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.31ರಂದು ಕೂಡ ಮುಂದುವರಿಯಲಿದೆ.

ಅ.27ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಒಣ ಹವೆ ಮೇಲುಗೈಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು