Friday, 8th November 2024

Karnataka Rain: ನ.10ಕ್ಕೆ ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆ ನಿರೀಕ್ಷೆ

Karnataka Rain

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಕಡಿಮೆಯಾಗಿದ್ದು, ಎಲ್ಲೆಡೆ ಒಣ ಹವೆ ಕಂಡುಬರುತ್ತಿದೆ. ನ.9ರಂದು ಕೂಡ ಇದೇ ರೀತಿಯ ಹವಾಮಾನ ಇರಲಿದೆ. ನಂತರ ನ.10ರಂದು ಭಾನುವಾರ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ನ.11 ಮತ್ತು 12ರಂದು ಕೂಡ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ನ.13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ನ.14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Building Collapse: ಬಂಗಾರಪೇಟೆಯಲ್ಲಿ ಏಕಾಏಕಿ ಕುಸಿದ 3 ಅಂತಸ್ತಿನ ಕಟ್ಟಡ; ತಪ್ಪಿದ ಭಾರಿ ಅನಾಹುತ!

ನ.10 ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಒಣ ಹವೆ ಇರುವ ಬಹಳನ್ನು ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಬಹಳನ್ನು ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 19 ° C ಆಗಿರಬಹುದು.