Friday, 13th December 2024

Karnataka Rain: ಮುಂದಿನ 5 ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 4 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ನಂತರ ಮಳೆ (Karnataka Rain) ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ಇನ್ನು ಅ. 3ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ ಅ. 4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಅ.5ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇದೇ ರೀತಿಯ ಹವಾಮಾನ ಅ.8 ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Healthy Brain: ದಿನಚರಿಯಲ್ಲಿ ಇರಲಿ ಈ ನಿಯಮ; ಆರೋಗ್ಯಕರವಾಗಿರಲಿ ಮೆದುಳು

ಅ.4ವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33° C ಮತ್ತು 22° C ಆಗಿರಬಹುದು.