ಬೆಂಗಳೂರು: ಅಕ್ಟೋಬರ್ 01 ರಿಂದ ಅಕ್ಟೋಬರ್ 9 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ ಮತ್ತು ಅಕ್ಟೋಬರ್ 2ರಿಂದ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ (Karnataka Rain) ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದ ಮಳೆಯಿಂದ ತುಂತುರು ಮಳೆ ಮತ್ತು ಅಕ್ಟೋಬರ್ 2 ರಿಂದ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 3 ರವರೆಗೆ ಚದುರಿದಂತೆ ತುಂತುರು ಮಳೆ ನಂತರ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಅ.2ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಅ.3 ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅ.4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.7ವರೆಗೆ ಇರಲಿದೆ.
ಈ ಸುದ್ದಿಯನ್ನೂ ಓದಿ | Relationship Tips: ಬ್ರಷ್, ಸ್ನಾನ ಮತ್ತು ಶೇವಿಂಗ್ ಮಾಡದಿದ್ದರೆ ಸಂಬಂಧ ಹಾಳಾಗಬಹುದು? ಹುಷಾರ್!
ಅ.3 ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31° C ಮತ್ತು 21° C ಆಗಿರಬಹುದು.