Wednesday, 23rd October 2024

ನಾಳೆಯಿಂದ ರಾಜ್ಯದಲ್ಲಿ ಅನ್‌ಲಾಕ್‌ 4.0 ಜಾರಿ ?

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ಜುಲೈ ೧೯ ರಂದು ಅಂತ್ಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದ ಅನ್‌ಲಾಕ್‌  4.0 ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸುತ್ತಿದ್ದಾರೆ.

ಈಗಾಗಲೇ ಜಾರಿಗೊಳಿಸಿರುವ ಅನ್ ಲಾಕ್ 3.0 ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡುವ ಕುರಿತಂತೆಯೂ ಚರ್ಚಿಸುತ್ತಿರುವಂತ ಸಿಎಂ ಯಡಿಯೂರಪ್ಪ, ನಿರ್ಬಂಧಿಸಿರುವಂತ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಕರೋನಾ ಸೋಂಕಿನ ಪಾಸಿಟಿವಿಟಿ ದರ ಮತ್ತಷ್ಟು ಇಳಿಕೆ ಕಂಡ ಹಿನ್ನಲೆಯಲ್ಲಿ, ಥಿಯೇಟರ್, ಶಾಲೆ-ಕಾಲೇಜು ಓಪನ್ ಹೊರತಾಗಿ, ಇನ್ನುಳಿದ ಎಲ್ಲಾ ಚಟುವಟಿಕೆಗಳಿಗೆ ಅನ್ ಲಾಕ್ 4.0 ಮಾರ್ಗಸೂಚಿಯ ಅನುಸಾರ, ಅವಕಾಶ ನೀಡಲಿದ್ದಾರೆ ಎನ್ನಲಾಗಿದೆ.