ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಗುರುವಾರ ಕರ್ನಾಟಕದಲ್ಲೇ ಕನಿಷ್ಠ ಉಷ್ಣಾಂಶ 14.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಮುಂದಿನ ಮೂರು ದಿನಗಳ ಕಾಲ (ನ.25ರವರೆಗೆ) ರಾಜ್ಯದಲ್ಲಿ ಬಹುತೇಕ ಒಣ ಹವೆಯಿರುವ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ದಾಖಲಾಗಿದ್ದು, ಬೀದರ್ನಲ್ಲಿ ಕನಿಷ್ಠ ಉಷ್ಣಾಂಶ 14.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಅದೇ ರೀತಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಉಷ್ಣಾಂಶ ವರದಿಯಾಗಿದೆ.
21.11.24 ರ 08.30 AM ನಿಂದ 22.11.24 ರ 08.30 AM ವರೆಗೆ ನಕ್ಷೆಗಳೊಂದಿಗೆ ಜಿಲ್ಲಾವಾರು ಸರಾಸರಿ ಕನಿಷ್ಠ, ಗರಿಷ್ಠ ಮತ್ತು ಏರಿಳಿತ ತಾಪಮಾನ(°C) ಕೋಷ್ಟಕ.
— Karnataka State Natural Disaster Monitoring Centre (@KarnatakaSNDMC) November 22, 2024
Districtwise Average #Minimum, #Maximum & Fluctuation #temperature (°C) table with maps from 08.30 AM of 21.11.24 to 08.30 AM of 22.11.24. #KSNDMC pic.twitter.com/KsqjsUh6uw
ನ. 26, 27ಕ್ಕೆ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ
26ರಂದು ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ.
ನ. 27ರಂದು ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಕೊಡಗು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ,, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 18 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 18 ಡಿಗ್ರಿ ಸೆಲ್ಸಿಯಸ್ ಇರುತ್ತದೆ.