ಬೆಂಗಳೂರು: ರಾಜ್ಯದಲ್ಲಿ ಉಷ್ಣಾಂಶ ದಿನೇದಿನೆ ಕುಸಿಯುತ್ತಿರುವ ಹಿನ್ನೆಲೆ ಚಳಿ ತೀವ್ರವಾಗಿದೆ. ಇನ್ನು ನ. 26ರಂದು ರಾಜ್ಯದೆಲ್ಲೆಡೆ ಒಣ ಹವಾಮಾನ ಇರಲಿದ್ದು, ಒಳನಾಡಿನ ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-2) ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇದು ಸಾಮಾನ್ಯಕ್ಕಿಂತ (2-4) ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಇನ್ನು ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯ ಪ್ರತ್ಯೇಕ ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯ (2-3) ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿರುತ್ತದೆ. ದಕ್ಷಿಣ ಒಳನಾಡಿನ ಕರ್ನಾಟಕದ ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಅಂತರಿಕ ಕರ್ನಾಟಕದ ಜಿಲ್ಲೆಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ ಎಂದು ಹೇಳಿದೆ.
ಭಾನುವಾರ ಬೀದರ್ನಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 13.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಉಡುಪಿಯಲ್ಲಿ ಗರಿಷ್ಠ ಉಷ್ಣಾಂಶ 34.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ಗಿಂದ ಕಡಿಮೆ ಉಷ್ಣಾಂಶ ದಾಖಲಾಗಿದೆ.
ನ. 27ರಿಂದ 29ರವರೆಗೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದ್ದು, ನ.30ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ಡಿ.1ರಂದು ದಕ್ಷಿಣ ಒಳನಾಡಿನ ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ.
ನ. 27ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಮಬ್ಬಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 17 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ. ಕೆಲವು ಪ್ರದೇಶಗಳಲ್ಲಿ ಮಬ್ಬಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 17 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Drugs Seized: ಮನೆ ಎದುರೇ ಡ್ರಗ್ಸ್ನಿಂದಲೇ ನಿರ್ಮಿಸಿರೋ ಮೂರ್ತಿ ನಿರ್ಮಾಣ! ರೇಡ್ ಮಾಡೋಕೆ ಬಂದ ಪೊಲೀಸರೇ ಶಾಕ್