Thursday, 12th December 2024

Karnataka Weather: ರಾಜ್ಯದಲ್ಲಿ ಕಡಿಮೆಯಾದ ಮಳೆ ಆರ್ಭಟ; ಇಂದು ಕೂಡ ಎಲ್ಲೆಡೆ ಒಣ ಹವೆ

Karnataka Weather

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಹಿಂಗಾರು ಮಳೆ (Karnataka Weather) ಅರ್ಭಟ ಕಡಿಮೆಯಾಗಿದ್ದು, ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ಇನ್ನು ನ. 10 ಮತ್ತು 11ರಂದು ಕೂಡ ಇದೇ ರೀತಿಯ ಪರಿಸ್ಥಿತಿ ಇರಲಿದ್ದು, ಬಳಿಕ ನ. 12ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.12ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ನ.13ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ನ.14ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ

ಇನ್ನು ನ.15ರಂದು ಕರಾವಳಿ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಒಂಡೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Karnataka Rain: ನ.12ರಿಂದ ನಾಲ್ಕು ದಿನ ಬೆಂಗಳೂರು, ಕೋಲಾರ ಸೇರಿ ವಿವಿಧೆಡೆ ಹಗುರ ಮಳೆ ಮುನ್ಸೂಚನೆ

ನ.11 ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 19 ° C ಆಗಿರಬಹುದು.