ಬೆಂಗಳೂರು: ನವೆಂಬರ್ 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ. 3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಕೊಡಗು, ರಾಮನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಅದೇ ರೀತಿ ನ. 4ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರರಗಿ, ವಿಜಯಪುರ, ಬೆಳಗಾವಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ನ.5ರಂದು ರಾಜ್ಯದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಇರಲಿದ್ದು, ಇದೇ ರೀತಿಯ ಹವಾಮಾನ ನ.7ರವರೆಗೆ ಮುಂದುವರಿಯಲಿದೆ.
ನ.3ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಈ ಸುದ್ದಿಯನ್ನೂ ಓದಿ | Indian Railways: ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ; ರಿಸರ್ವೇಷನ್ ಅವಧಿ 60 ದಿನಕ್ಕೆ ಇಳಿಕೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಆಗಿರಬಹುದು.