Wednesday, 11th December 2024

Karnataka Weather: ಇಂದು ಕರಾವಳಿ ಭಾಗ, ಚಾಮರಾಜನಗರ ಸೇರಿ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಅಕ್ಟೋಬರ್ 7ರಂದು ಸೋಮವಾರ ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ. 9ರಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.12ವರೆಗೆ ಇರಲಿದೆ.

ಈ ಸುದ್ದಿಯನ್ನೂ ಓದಿ | Cash Deposit Limit: ಯಂತ್ರದ ಮೂಲಕ ದಿನಕ್ಕೆ ಎಷ್ಟು ಹಣ ಬ್ಯಾಂಕ್‌ಗೆ ಠೇವಣಿ ಮಾಡಬಹುದು?

ಅಕ್ಟೋಬರ್ 8ರ ಬೆಳಗ್ಗೆ ವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27° C ಮತ್ತು 20° C ಆಗಿರಬಹುದು.