Wednesday, 11th December 2024

Karnataka Weather: ಇಂದು ಉತ್ತರ ಕನ್ನಡ ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆ!

Karnataka Weather

ಬೆಂಗಳೂರು: ಸೆ. 6ರಂದು ಉತ್ತರ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯ ವೇಗ (40-50 kmph) ಇರಲಿದೆ. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನು ಸೆ.7ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಅದೇ ರೀತಿ ಸೆ. 8ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಸೆ.11ರವರೆಗೆ ಇದೇ ರೀತಿಯ ಹವಾಮಾನ ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಆಗಿರಬಹುದು.