Thursday, 21st November 2024

Karnataka Weather: ಇಂದು ಹಾಸನ, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Weather

ಬೆಂಗಳೂರು: ಅ. 12ರಂದು ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಅ.13ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಅ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅದೇ ರೀತಿ ಅ.14ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹಾಗೆಯೇ ಅ.15ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.17ರವರೆಗೆ ಮುಂದುವರಿಯಲಿದೆ.

ಮೀನುಗಾರರಿಗೆ ಮುನ್ನೆಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ 35 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿರಲಿದೆ. ಹೀಗಾಗಿ ಮೀನುಗಾರರು ಎಚ್ಚರಿಕೆಯಿಂದ ಇರಬೇಕು.

ಈ ಸುದ್ದಿಯನ್ನೂ ಓದಿ | Diabetes Tips: ನಿಮ್ಮ ಹಿತ್ತಲಲ್ಲಿ ಇರುವ ಈ ಹೂವು ಮಧುಮೇಹ ಸಮಸ್ಯೆಗೆ ರಾಮಬಾಣ!

ಅ.11ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು.