Wednesday, 27th November 2024

Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ ಹಲವೆಡೆ ಅಬ್ಬರಿಸಲಿದೆ ಮಳೆ!

Karnataka Weather

ಬೆಂಗಳೂರು: ಅ.21ರವರೆಗೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಹೀಗಾಗಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Karnataka Rain) ಸಾಧ್ಯತೆಯಿದೆ.

ಇನ್ನು ಅ.20ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.21ರಂದು ಬೆಳಗಾವಿ, ಧಾರವಾಡ, ಹಾವೇರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅ.22ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ
ಸಾಧ್ಯತೆಯಿದೆ.

ಅದೇ ರೀತಿ ಅ.23 ರಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.25ರವರೆಗೆ ಮುಂದುವರಿಯಲಿದೆ.

ಈ ಸುದ್ದಿಯನ್ನೂ ಓದಿ | Health Tips: ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಬದನೆಕಾಯಿ ಸೇವಿಸಬೇಡಿ

ಅ.21 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ° C ಮತ್ತು 20° C ಆಗಿರಬಹುದು.