Thursday, 31st October 2024

Karnataka Weather: ಇಂದಿನ ಹವಾಮಾನ; ಬೆಂಗಳೂರು, ಚಿತ್ರದುರ್ಗ ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣರಾಯ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ (Karnataka Weather) ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗುಡಗು ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ.1ರಂದು ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.

ನ.2ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನು 3ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವೆಯಿರುವ ಸಾಧ್ಯತೆಯಿದೆ.

ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಮುಂದಿನ 5 ದಿನಗಳ ಕಾಲ ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ರಾಜ್ಯದ ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಅ.31ರಿಂದ ನ.2ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ನ.1, 2ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Bone Health: ಮೂಳೆ ಆರೋಗ್ಯಕರವಾಗಿರಬೇಕೆಂದರೆ ಈ ಜೀವಸತ್ವಗಳನ್ನು ತಪ್ಪದೇ ಸೇವಿಸಿ!