ಬೆಂಗಳೂರು: ಅ. 24ರಂದು ಕರಾವಳಿಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಗುರುವಾರ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಇನ್ನು ಅ.25ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಅದೇ ರೀತಿ
ಅ. 26ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ.
ಹಾಗೆಯೇ ಅ.27ರಂದು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ, ಉತ್ತರ ಹಾಗೂ ಕರಾವಳಿ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಇದೇ ರೀತಿಯ ಹವಾಮಾನ ಅ.29ರವರೆಗೆ ಮುಂದುವರಿಯಲಿದೆ.
ಈ ಸುದ್ದಿಯನ್ನೂ ಓದಿ | Bengaluru Rain: ರಾಜಧಾನಿಯಲ್ಲಿ ಮತ್ತೆ ಮಳೆಯಾರ್ಭಟ; ಬಿಟಿಎಂ ಲೇಔಟ್‌ನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ, ಮುಳುಗಿದ ವಾಹನಗಳು!
ಅ.25ರ ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.