Friday, 13th December 2024

Karnataka Weather: ಇಂದು ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather

ಬೆಂಗಳೂರು: ನ. 5ರಂದು ಮಂಗಳವಾರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ನ. 6 ಮತ್ತು 7ರಂದು ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ಹಾಗೆಯೇ ನ.8ರಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನ. 9ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಎಂದು ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನೂ ಓದಿ | Karnataka Rain: ನವೆಂಬರ್‌ನಲ್ಲಿ ಆರ್ಭಟಿಸಲಿದ್ದಾನೆ ವರುಣ; ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

ನ. 5ರಂದು ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ತುಂಬಾ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.