Thursday, 12th December 2024

Karnataka Weather: ಇಂದಿನ ಹವಾಮಾನ; ಉತ್ತರ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಬಾರಿ ಮಳೆಯಾಗುವ ಮುನ್ಸೂಚನೆ ಇದೆ. ಅ.13ರಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಅ. 14ರಂದು ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅದೇ ರೀತಿ ಅ.15ರಂದು ಚಾಮರಾಜನಗರ, ತುಮಕೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇನ್ನು ಅ. 16ರಂದು ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ರೀತಿಯ ಹವಾಮಾನ ಅ. 18ರವರೆಗೆ ಮುಂದುವರಿಯಲಿದೆ.

ಮೀನುಗಾರರಿಗೆ ಮುನ್ನೆಚ್ಚರಿಕೆ:

ಕರ್ನಾಟಕ ಕರಾವಳಿಯಲ್ಲಿ 35 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ಮೇಲೆ ಯಾವುದೇ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗಿಲ್ಲ.

ಈ ಸುದ್ದಿಯನ್ನೂ ಓದಿ | Health Tips: ಸದಾ ಆರೋಗ್ಯವಾಗಿರಬೇಕೆ? ಹಾಗಾದ್ರೆ ವೈದ್ಯರು ಹೇಳಿದ ಈ ಸಲಹೆಗಳನ್ನು ಪಾಲಿಸಿ!

ಅ.14ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.