ಬೆಂಗಳೂರು: ಅ.27ರಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮತ್ತು ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ (Karnataka Weather) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಅ.28ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಎಂದು ಮಾಹಿತಿ ನೀಡಿದೆ.
ಅ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ.
ಅ.30ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯು ಚಾಲ್ತಿಯಲ್ಲಿರಲಿದೆ. ಇದೇ ರೀತಿಯ ಹವಾಮಾನ ನ.1ರವರೆಗೆ ಮುಂದುವರಿಯಲಿದೆ.
ಈ ಸುದ್ದಿಯನ್ನೂ ಓದಿ | Areca nut: ಅಡಿಕೆ ಎಲೆಚುಕ್ಕಿ ರೋಗ; ಮತ್ತೊಂದು ಅಲೆಗೆ ಬೆಚ್ಚಿ ಬಿದ್ದಿದೆ ಮಲೆನಾಡು-ಕರಾವಳಿ!