Thursday, 26th December 2024

Karnataka Weather: ಇಂದಿನ ಹವಾಮಾನ; ಮೈಸೂರು, ರಾಮನಗರ ಸೇರಿ ಹಲವೆಡೆ ಮಳೆ ಸಾಧ್ಯತೆ

Karnataka Weather

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮೈ ಕೊರೆಯುವ ಚಳಿ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದೆ. ಡಿ.26ರಂದು ಕೂಡ ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವಾಮಾನ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ತಿಳಿಸಿದೆ.

ಇನ್ನು ಡಿ.27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆ ಹೊರತುಪಡಿಸಿ, ರಾಜ್ಯದಾದ್ಯಂತ ಒಣ ಹವಾಮಾನ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ. ಡಿ.28, 29, 30 ಹಾಗೂ 31ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ

ಡಿ.27ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27° C ಮತ್ತು 18° C ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 18° C ಇರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Viral Video: ಅರೇ ಇದೇನಿದು ಕ್ರಿಸ್ಮಸ್ ಟ್ರೀ ಹೇರ್‌ ಸ್ಟೈಲ್‌? ಲಲನೆಯರು ಫುಲ್‌ ಫಿದಾ!