ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದ್ದು, ಅಲ್ಲಲ್ಲಿ ಲಘು ಮಳೆಯಾಗುತ್ತಿದೆ. ಇನ್ನು ನ. 3ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನ.4ರಂದು ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ನ.5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ನ.6 ಮತ್ತು 7ರಂದು ರಾಜ್ಯದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.
ನ.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Self Harming: ಗಂಡ, ಅತ್ತೆಯ ಕಾಟಕ್ಕೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ನ.4ರ ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ° C ಮತ್ತು 21 ° C ಆಗಿರಬಹುದು.