Thursday, 12th December 2024

Karnataka Weather: ಹವಾಮಾನ ವರದಿ; ಇಂದು ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Karnataka Weather

ಬೆಂಗಳೂರು: ಅ.14ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಅ.15ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ.16ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಾಗೆಯೇ ಅ.17ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಚಾಮರಾಜನಗರ, ಕೊಡಗು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದೇ ರೀತಿಯ ಹವಾಮಾನ ಅ.18ರಂದು ಕೂಡ ಮುಂದುವರಿಯಲಿದೆ.

ಮೀನುಗಾರಿಕಾ ಮುನ್ನೆಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ 35 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ.

ಈ ಸುದದಿಯನ್ನೂ ಓದಿ | Kids Health: ವಿಟಮಿನ್ ಬಿ-12 ಕೊರತೆಯಾದರೆ ಮಕ್ಕಳಿಗೆ ಈ ಸಮಸ್ಯೆಗಳು ಕಾಡುತ್ತವೆ

ಅ.15ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 20° C ಮತ್ತು 20° C ಆಗಿರಬಹುದು.