Thursday, 12th September 2024

Karnataka weather: ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ!

Karnataka weather

ಬೆಂಗಳೂರು: ಸೆ.5ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಕಡೆ ಭಾರಿ ಮಳೆ ಮತ್ತು ನಿರಂತರ ಗಾಳಿಯ ವೇಗ (30- 40 kmph) ತಲುಪುವ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಸೆ.6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಸೆ.7ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಸೆ.10ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Modern Anganwadi: ರಾಜ್ಯದಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ; ಕೇಂದ್ರದಿಂದ ಮಂಜೂರಾತಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 20 ° C ಆಗಿರಬಹುದು.

ಸೆ.11ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಸೆಪ್ಟೆಂಬರ್ 11ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ (Heavy Rain) ನಿರೀಕ್ಷೆಯಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (Karnataka Weather) ಮುನ್ಸೂಚನೆ ನೀಡಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.

Leave a Reply

Your email address will not be published. Required fields are marked *