Friday, 22nd November 2024

KEA Exam: VAO, GTTC ಹುದ್ದೆ ನೇಮಕಾತಿ; ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ

VAO Exam 2024

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ತಾತ್ಕಾಲಿಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಗ್ರಾಮ ಆಡಳಿತ ಅಧಿಕಾರಿ ಮತ್ತು ಜಿಟಿಟಿಸಿಯ (VAO-GTTC ) ವಿವಿಧ ಹುದ್ದೆಗಳ‌ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ವೆಬ್ ಸೈಟ್‌ನ‌ ಲಿಂಕ್‌ನಲ್ಲಿ https://cetonline.karnataka.gov.in/vaoresult/checkresult.aspx ನಮೂದಿಸಿ, ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.

ಸೆ.29ರಂದು ನಡೆದಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exam) ಇತ್ತೀಚೆಗೆ ಪ್ರಕಟಿಸಿತ್ತು. ಈ ಪರೀಕ್ಷೆಯಲ್ಲಿ ಅರ್ಹತಾ ಅಂಕ (ಕನಿಷ್ಠ 50) ಗಳಿಸಿದವರಿಗೆ ಮಾತ್ರ ಅ. 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ | KEA Exam: VAO, GTTC ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಪರೀಕ್ಷೆ ಯಾವಾಗ?

ಗ್ರಾಮ ಆಡಳಿತಾಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಸೆ.29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆದಿತ್ತು. ಇನ್ನು ರಾಜ್ಯ ಸರ್ಕಾರ ಗ್ರೂಪ್‌ ಬಿ ಮತ್ತು ಸಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಿದ್ದರಿಂದ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿತ್ತು. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ. 26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದ್ದು, ಅ. 27ರಂದು ಎಲ್ಲಾ ಅಭ್ಯರ್ಥಿಗಳಿಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ.