Thursday, 12th December 2024

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಕೊಲ್ಹಾರ: ಕಾಂಗ್ರೆಸ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬ.ಬಾಗೇವಾಡಿ ತಾಲೂಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಲೀಂ ಕೊತ್ತಲ್, ಕೊಲ್ಹಾರ ತಾಲೂಕ ಜೆಡಿಎಸ್ ಅಧ್ಯಕ್ಷ ಗುಲಾಬ ಪಕಾಲಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಹೆಚ್.ಸಿ ಮಹಾದೇವಪ್ಪ ಕಾಂಗ್ರೆಸ ಪಕ್ಷದ ಶಾಲು ಹಾಕುವ ಮೂಲಕ ಮುಖಂಡರನ್ನು ಅಧಿಕೃತವಾಗಿ ಕಾಂಗ್ರೆಸ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಕಲ್ಲು ದೇಸಾಯಿ, ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಆರ್.ಬಿ ಪಕಾಲಿ ಸಹಿತ ಅನೇಕ ಕಾಂಗ್ರೆಸ ಮುಖಂಡರು ಉಪಸ್ಥಿತರಿದ್ದರು.