Monday, 16th September 2024

ಶಾಸಕ ಎನ್.ಮಹೇಶ್ ಪತ್ನಿ ವಿಜಯಾ ನಿಧನ

ಕೊಳ್ಳೇಗಾಲ: ಸ್ಥಳೀಯ ಶಾಸಕ ಎನ್.ಮಹೇಶ್ ಪತ್ನಿ ವಿಜಯಾ (64) ಅವರು ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಕೊನೆಯುಸಿರೆಳೆದರು.

ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತಿ ಎನ್.ಮಹೇಶ್ ಹಾಗೂ ಪುತ್ರ ಇದ್ದಾರೆ. ಅಂತ್ಯಸಂಸ್ಕಾರ ಕನಕಪುರದಲ್ಲಿರುವ ಕಾನ್ಸಿ ಫೌಂಡೇಷನ್‌ನಲ್ಲಿ ಸೋಮವಾರ ಸಂಜೆ ನಡೆಯಲಿದೆ.

Leave a Reply

Your email address will not be published. Required fields are marked *