ಕೊಪ್ಪಳ: ಮಂಡ್ಯದ ನಾಗಮಂಗಲದ ಕೋಮುಗಲಭೆ, ಮಂಗಳೂರಿನ ಕಾಟಿಪಳ್ಳದಲ್ಲಿ ಈದ್ ಮಿಲಾದ್ ಹಬ್ಬದ ಮುನ್ನಾ ದಿನ ಮಸೀದಿಯೊಂದರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಒಂದೆಡೆಯಾದರೆ ಮತ್ತೊಂದೆಡೆ ಕೊಪ್ಪಳ ಜಿಲ್ಲೆಯಲ್ಲಿ (Koppal News) ಮುಸ್ಲಿಂಮರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ, ಈದ್ ಮಿಲಾದ್ ಹಬ್ಬ ಆಚರಿಸುವ ಮೂಲಕ ಹಿಂದೂ-ಮುಸ್ಲಿಂ ಭಾವೈಕೈತೆ ಸಾರಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಮುಸ್ಲಿಂ ಬಾಂಧವರು ಹೂವಿನ ಮಾಲೆ, ಕೇಸರಿ ಶಾಲು, ಪೇಟಾ ತೊಡಿಸಿ, ಪೂಜೆ ಸಲ್ಲಿಸಿದ ಬಳಿಕ ಈದ್ ಮಿಲಾದ್ ಹಬ್ಬವನ್ನು ಆಚರಿಸಿದರು. ಈ ಮೂಲಕ ಹಬ್ಬದಲ್ಲಿ ಹಿಂದೂ-ಮುಸ್ಲಿಮರು ಭಾವೈಕತೆ ಸಾರಿದರು.
ಈ ಸುದ್ದಿಯನ್ನೂ ಓದಿ | Job Guide: 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ NTPC; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಈದ್ ಮಿಲಾದ್ ಪ್ರಯುಕ್ತ ಶರಬತ್ ವಿತರಣೆ
ಈದ್ ಮಿಲಾದ್ ಪ್ರಯುಕ್ತ ಶರಬತ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಹಿಂದೂ ಹಾಗೂ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು.