ಹರಪನಹಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಜನಸಾಮಾನ್ಯರ ನಾಯಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡ ಲಾಗಿದೆ.
ಕಳೆದ ಎರಡುವರೆ ವರ್ಷಗಳಿಂದ ನಿರಂತರವಾಗಿ ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಗಲಿರುಳು ಸಂಘಟಿಸುತ್ತಿರುವ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರ ಶ್ರಮವನ್ನು ಗುರುತಿಸಿರುವ ಕಾಂಗ್ರೆಸ್ ಪಕ್ಷದ ಅಧಿನಾಯಕಿ, ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನನ್ನ ಸಹೋದರ, ಮಾಜಿ ಶಾಸಕ ಎಂ.ಪಿ.ರವೀಂದ್ರ ನಿಧನರಾದ ನಂತರ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ಇದನ್ನು ಗುರುತಿಸಿ ಈ ಹಿಂದೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಇದೀಗ ಎಐಸಿಸಿ ನಾಯಕರು ಮತ್ತು ಕೆಪಿಸಿಸಿ ನಾಯಕರು ನಮ್ಮ ಮೇಲೆ ವಿಶ್ವಾಸವಿಟ್ಟು ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದರಿಂದ ಜವಾಬ್ದಾರಿ ಹೆಚ್ಚಿದೆ. ನನ್ನ ಮೇಲೆ ಭರವಸೆ ಇಟ್ಟು ಹುದ್ದೆ ನೀಡಿರುವುದರಿಂದ ಶಕ್ತಿ ಮೀರಿ ಪ್ರಾಮಾಣಿಕವಾಗಿ ಪಕ್ಷದ ಸಂಘಟನೆ ಯಲ್ಲಿ ಭಾಗಿಯಾಗುತ್ತೇನೆ ಎಂದು ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.