Wednesday, 11th December 2024

ಜೂ.25ರಿಂದ ಕೆಎಸ್‌ಆರ್‌ಟಿಸಿಯಿಂದ ಅಂತಾರಾಜ್ಯ ಬಸ್ ಸಂಚಾರ ಆರಂಭ

ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ.

ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ ಜೂ.25ರಿಂದ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಪ್ರಯಾಣಿಕರನ್ನು ಹೊತ್ತು ಸಾಗಲಿದೆ.

ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಪ್ರಸ್ತುತ ಕೋವಿಡ್ ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲ ಕ್ಕಾಗಿ ಜೂ.25ರಿಂದ ಬೆಂಗಳೂರು, ಶಿವಮೊಗ್ಗಮ ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಬಸ್ ತೆರಳಲು ಅವಕಾಶ ಮಾಡಿಕೊಡಲಾಗಿದೆ.