Sunday, 5th January 2025

Kuladalli keelyavudo Movie: ʼಕುಲದಲ್ಲಿ ಕೀಳ್ಯಾವುದೋʼ ಚಿತ್ರದ ಫಸ್ಟ್ ಲುಕ್ ರಿಲೀಸ್‌ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Kuladalli keelyavudo Movie

ಬೆಂಗಳೂರು: ಕೆ. ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸುತ್ತಿರುವ ʼಕುಲದಲ್ಲಿ ಕೀಳ್ಯಾವುದೋʼ ಚಿತ್ರದ (Kuladalli keelyavudo Movie) ಫಸ್ಟ್ ಲುಕ್ ಹೊಸವರ್ಷದ ಮೊದಲ‌ ದಿನ ಬಿಡುಗಡೆಯಾಗಿದೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಫಸ್ಟ್ ಲುಕ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಇತ್ತೀಚೆಗಷ್ಟೇ ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಸಂಗೀತ ಸಂಯೋಜಿಸಿರುವ ಈ ಚಿತ್ರದ ಆಡಿಯೋ ರೈಟ್ಸ್ ಕೂಡ ಮನೋಮೂರ್ತಿ ಮ್ಯೂಸಿಕಲ್ ಕಂಪನಿಗೆ ಬಾರಿ ಮೊತ್ತಕ್ಕೆ ಮಾರಾಟವಾಗಿದೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ರಾಮ್ ನಾರಾಯಣ್ ಹಾಡುಗಳನ್ನು ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | KMA Awards: ವಿಶ್ವವಾಣಿ ವರದಿಗಾರ ಶಿವಕುಮಾರ್‌ ಬೆಳ್ಳಿತಟ್ಟೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ!

ಉತ್ತಮ ಕಂಟೆಂಟ್‌ವುಳ್ಳ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.