ಹರಪನಹಳ್ಳಿ: ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿಯಾಗಿ ಸೇವನಗರ ಗ್ರಾಮದ ಎಲ್. ಮಂಜಾನಾಯ್ಕ ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ಬಿ.ಆರ್. ನಾಯ್ಡು ಅವರು ಎಲ್. ಮಂಜ್ಯಾನಾಯ್ಕ ಅವರನ್ನು ನೇಮಕಮಾಡಿ, ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧ ನೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.