ಬೆಳಗಾವಿ: ಕೇಂದ್ರ ಸರ್ಕಾರದ (Central Government) ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದರು. ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022 ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಸುದ್ದಿಯನ್ನೂ ಓದಿ | Sensex Down Today: 13ನೇ ಬ್ಲ್ಯಾಕ್ ಫ್ರೈಡೇ! ಸೆನ್ಸೆಕ್ಸ್ 1,100 ಅಂಕ ಪತನ, ಕಾರಣವೇನು?
ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯ
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಈ ಸುದ್ದಿಯನ್ನೂ ಓದಿ | Kerebete Movie: ʼಕೆರೆಬೇಟೆʼ ಚಿತ್ರದ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್!
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.