Thursday, 12th December 2024

Land encroachment: ನಾಗರಬಾವಿಯಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಕಟ್ಟಡಗಳ ತೆರವು; 430 ಕೋಟಿ ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ

Land encroachment

ಬೆಂಗಳೂರು: ನಗರದಲ್ಲಿ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ನಗರದ ನಾಗರಬಾವಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಕಟ್ಟಡಗಳನ್ನು (Land encroachment) ತೆರವುಗೊಳಿಸಿ, ಸುಮಾರು ರೂ. 430 ಕೋಟಿ ಆಸ್ತಿಯನ್ನು ಮರುವಶ ಮಾಡಿಕೊಳ್ಳಲಾಗಿದೆ.

ನಾಗರಬಾವಿಯ ಸರ್ವೆ ನಂ. 78 ರಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಗೋಡೌನ್, ಶೆಡ್‌ಗಳನ್ನು ತೆರವುಗೊಳಿಸಿ, ಬಿಡಿಎಗೆ ಸೇರಿದ 6 ಎಕರೆ ಪ್ರದೇಶದ ಸುಮಾರು ರೂ. 430 ಕೋಟಿ ಆಸ್ತಿಯನ್ನು ಪ್ರಾಧಿಕಾರವು ತನ್ನ ವಶಕ್ಕೆ ತೆಗೆದುಕೊಂಡಿತು.

ಈ ಸುದ್ದಿಯನ್ನೂ ಓದಿ | HD Kumaraswamy: ಭ್ರಷ್ಟ ಐಪಿಎಸ್ ಅಧಿಕಾರಿಗೆ ಕಾಂಗ್ರೆಸ್ ಸರ್ಕಾರದ ಕೃಪಾಕಟಾಕ್ಷ: ಎಚ್‌ಡಿಕೆ ಆರೋಪ

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರವರ ನೇತೃತ್ವದಲ್ಲಿ ಅಭಿಯಂತರ ಅಧಿಕಾರಿ, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬಿ.ಡಿ.ಎ. ಅವರು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ಸಚಿವ ಜಮೀರ್‌ ಅಹ್ಮದ್‌ಗೂ ಸಂಕಷ್ಟ; ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಮುಡಾ ಹಗರಣದಲ್ಲಿ (Muda Case) ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಸಚಿವ ಜಮೀರ್‌ ಅಹ್ಮದ್‌ ಅವರಿಗೂ ಸಂಕಷ್ಟ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ (Zameer Ahmed) ಅವರು, ಇದು ರಾಜಕೀಯ ಪ್ರೇರಿತ ತೀರ್ಪು ಎಂದು ಹೇಳಿದ್ದರು. ಹೀಗಾಗಿ ಅವರ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.

ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಅವರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್ ಅವರು, ಇದು ರಾಜಕೀಯ ಪ್ರೇರಿತ ಕೋರ್ಟ್ ತೀರ್ಪು, ರಾಜಕೀಯ ಆದೇಶ ಎಂದು ಲಘುವಾಗಿ ಮಾತನಾಡಿದ್ದರು. ಹೀಗಾಗಿ ಅವರಿಗೆ ಸಂಕಷ್ಟ ಎದುರಾಗಿದೆ.

ಈ ಸುದ್ದಿಯನ್ನೂ ಓದಿ | Congress guarantees: 5 ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿವೆ: ಪುರುಷೋತ್ತಮ ಬಿಳಿಮಲೆ

ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ತನಿಖೆಗೆ ಕೋರ್ಟ್‌ ಸೂಚನೆ ನೀಡಿದ್ದರಿಂದ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah)ಮತ್ತು ಇತರರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. ಆದರೆ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣವನ್ನು ರಾಜ್ಯದ ತನಿಖಾ ಸಂಸ್ಥೆಗೆ ವಹಿಸಿರುವುದರಿಂದ ಅಧಿಕಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ನೀಡಬೇಕು ಎಂದು ಉಚ್ಚ ನ್ಯಾಯಾಲಯಕ್ಕೆ ದೂರುದಾರರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ. ಈ ನಡುವೆ ದೂರುದಾರರ ಪರ ವಕೀಲರು ಇತ್ತೀಚೆಗೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಹೇಳಿದ್ದರು. ಈ ನಡುವೆ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿ, ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.