ಬೆಂಗಳೂರು: ಪಡಿತರ ಚೀಟಿದಾರರಿಗೆ ರೇಷನ್ ಕಾರ್ಡ್ನಲ್ಲಿ (Ration Card) ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ (Correction) ಅವಕಾಶವಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರ ಹಾಗೂ ಸೇರ್ಪಡೆಗೆ http://ahara.kar.nic.in ಗಮನಿಸಬಹುದು.
ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.
ಹೀಗೆ ಮಾಡಿ:
ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.
ಇದನ್ನೂ ಓದಿ: Congress Session: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ, ಗಾಂಧಿ ಪ್ರತಿಮೆ ಅನಾವರಣ