ಬೆಂಗಳೂರು: ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ (Leopard attack) ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ವೇಳೆ ದಾಳಿ ಮಾಡಿರುವ ಚಿರತೆ, ಮಹಿಳೆಯ ರಕ್ತ ಹೀರಿ ರುಂಡವನ್ನು ಹೊತ್ತೊಯ್ದಿದೆ.
ಕರಿಯಮ್ಮ (55) ಮೃತ ಮಹಿಳೆ. ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಗೊಲ್ಲರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಚಿರತೆಯು ಆಗಾಗ ಕಾಣಿಸಿಕೊಂಡಿದ್ದು, ಎಚ್ಚೆತ್ತುಕೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.
ಕಳೆದ ವಾರವು ಸಹ ವ್ಯಕ್ತಿ ಒಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು ಎಂದು ಮಾಹಿತಿ ದೊರೆತಿದ್ದು. ಅರಣ್ಯ ಇಲಾಖೆ ಕೇವಲ ಬೋನ್ ಅಳವಡಿಸಿ ನಿರ್ಲಕ್ಷ್ಯ ತೋರಿರುವುದರಿಂದಲೇ ದಾಳಿಯಾಗಿದೆ ಎಂದು ಅರಣ್ಯ ಇಲಾಖೆಯ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನೂ ಹೊತ್ತೊಯ್ಯಲು ಯತ್ನಿಸಿದ ಚಿರತೆ
ಮಹಿಳೆ ಕರಿಯಮ್ಮನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ
ರವಾನೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ. ಅಂತ್ಯ ಸಂಸ್ಕಾರದ ವೇಳೆ ಬೆಂಕಿ ಹಾಕಿ ಮಹಿಳೆಯ ಶವ ಕಾಯುತ್ತಿದ್ದವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಪೊಲೀಸ್ ಹಾಗೂ ಸಾರ್ವಜನಿಕರನ್ನೇ ಬೆದರಿಸಿ ಮೃತದೇಹವನ್ನು ಹೊತ್ತೊಯಲು ಚಿರತೆ ಯತ್ನಿಸಿದೆ. ಕೂಡಲೇ ಅಲ್ಲಿದ್ದ ಜನರು ದೊಣ್ಣೆ, ಮಚ್ಚು ಮತ್ತು ಟಾರ್ಚ್ ಬಳಸಿ ಮತ್ತೊಮ್ಮೆ ಚಿರತೆ ಬಾಯಿಯಿಂದ ಮೃತದೇಹವನ್ನು ಬಿಡಿಸಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Beant Singh killer: ಮಾಜಿ ಸಿಎಂ ಹತ್ಯೆ ಕೇಸ್; ಹಂತಕನ ಕ್ಷಮಾದಾನ ಅರ್ಜಿ ಬಗ್ಗೆ 2 ವಾರಗಳಲ್ಲಿ ನಿರ್ಧಾರ! ರಾಷ್ಟ್ರಪತಿ ಕಚೇರಿಗೆ ಸುಪ್ರೀಂ ಕೋರ್ಟ್ ಸೂಚನೆ
ಬೆಂಗಳೂರಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ವಿದ್ಯಾರ್ಥಿಯ ಗುರುತು ಪತ್ತೆಯಾಗಿಲ್ಲ. ಕಾಲೇಜು ಬದಲಾವಣೆ ವಿಚಾರಕ್ಕೆ ಪೋಷಕರ ಜತೆ ವಿದ್ಯಾರ್ಥಿ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.
ಈ ಸುದ್ದಿಯನ್ನೂ ಓದಿ | College Ragging: ಗಂಟೆಗಟ್ಟಲೇ ನಿಲ್ಲುವಂತೆ ಸೀನಿಯರ್ಸ್ ಆದೇಶ! ರ‍್ಯಾಗಿಂಗ್‌ಗೆ MBBS ವಿದ್ಯಾರ್ಥಿ ಬಲಿ