Thursday, 30th November 2023

ಡಿ.8 ರಿಂದ 3 ದಿನ ಮದ್ಯ ಮಾರಾಟಕ್ಕೆ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಡಿ.8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ.  ಡಿ.8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯ ವರೆಗೆ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದಿದ್ದಾರೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿ.10ರಂದು ಮತದಾನ ನಡೆಯಲಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ.

error: Content is protected !!