Saturday, 4th January 2025

Liquor Sales: ಮದ್ಯ ಮಾರಾಟಕ್ಕೆ ದಿಡೀರ್‌ ಕಿಕ್;‌ ನಿನ್ನೆ ಅರ್ಧ ದಿನದಲ್ಲಿ 308 ಕೋಟಿ ರುಪಾಯಿ ವ್ಯಾಪಾರ

Karnataka bypolls

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ (New Year Celebration) ಹಿನ್ನೆಲೆಯಲ್ಲಿ ಮದ್ಯದ ಹೊಳೆಯೇ ಹರಿದಿದ್ದು, ಅಬಕಾರಿ ಇಲಾಖೆಗೆ (excise department) ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ (Liquor Sales) ಮಾರಾಟವಾಗಿದೆ.

ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್​ಬಿಸಿಎಲ್​​ನಿಂದ ಮದ್ಯ ಖರೀದಿ ಮಾಡಿದ್ದಾರೆ.

ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.

27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿವಿಧ ಕಡೆ ಲಕ್ಷಾಂತರ ಮಂದಿ ಸಂಭ್ರಮದಿಂದ ನೂತನ ವರ್ಷವನ್ನು ಸ್ವಾಗತಿಸಿದರು. ಬಾರ್‌, ಪಬ್‌, ರೆಸ್ಟುರಾಗಳು ತುಂಬಿಹೋಗಿದ್ದವು.

ಇದನ್ನೂ ಓದಿ: New Year: ಹೊಸ ವರ್ಷ; ಎಲ್ಲೆಲ್ಲಿ ಹೇಗ್ಹೇಗೆ?