Wednesday, 11th December 2024

ರಾಜ್ಯಾದ್ಯಂತ ಎಲ್’ಕೆಜಿ, ಯುಕೆಜಿ ತರಗತಿ ಆರಂಭ

ಬೆಂಗಳೂರು : ಕರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದೆ.

ಇದೀಗ ರಾಜ್ಯಾದ್ಯಂತ ಇಂದಿನಿಂದ ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವು ದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿ ಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

  • ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸು ವುದು.
  • ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿ ಸುವುದು.
  • ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.
  • ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
  • ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.
  • ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
  • ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.
  • ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.