Saturday, 14th December 2024

ಆ.15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

ಬೆಂಗಳೂರು : ರಾಜ್ಯದಲ್ಲಿ ಕರೋನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಆ.15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯಾಧ್ಯಂತ ಮಂಗಳವಾರ ಹೊಸದಾಗಿ 1,338 ಜನರಿಗೆ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಬೆಂಗಳೂರಿನ ಮೂವರು ಸೇರಿದಂತೆ ರಾಜ್ಯದಲ್ಲಿ 31 ಸೋಂಕಿತರು ಮೃತಪಟ್ಟಿದ್ದರು.