Saturday, 14th December 2024

ಮೇ 24 ರ ಬಳಿಕವೂ ಲಾಕ್ ಡೌನ್? : ಇಂದು ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕರೋನಾ ನಿಯಂತ್ರಣಕ್ಕೆ ಮೇ. 24 ರವರೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು , ಬಳಿಕವೂ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆ ಮಹತ್ವ ಪಡೆದಿದೆ.

11.30ಕ್ಕೆ ಸಿಎಂ‌ ಬಿಎಸ್ ಯಡಿಯೂರಪ್ಪ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ, ಬಳಿಕ ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 30,309 ಜನರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, 58,395 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.