ಬೆಂಗಳೂರು : ಬಿಬಿಎಂಪಿ (BBMP) ಪಶ್ಚಿಮ ವಲಯ ಕಲ್ಯಾಣ ವಿಭಾಗದಲ್ಲಿ ನಡೆದಿರುವ ಬಹುಕೋಟಿ ಹಗರಣ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಬೆಂಗಳೂರಿನಲ್ಲಿರುವ (Bengaluru news) ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಮುಂಜಾನೆಯೇ ದಾಳಿ (Lokayukta Raid) ನಡೆಸಿ ಶಾಕ್ ನೀಡಿದ್ದಾರೆ.
ಬಿಬಿಎಂಪಿ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಹಲವು ದಾಖಲೆಗಳನ್ನು ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಮನೆ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯ ಲಲಿತಾ ನಿವಾಸ ಹಾಗೂ ವೈಯ್ಯಾಲಿಕಾವಲಿನಲ್ಲಿರುವ ಸತ್ಯಮೂರ್ತಿ ನಿವಾಸದಲ್ಲಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಪಶ್ಚಿಮ ವಲಯ ಕಲ್ಯಾಣ ವಿಭಾಗದಲ್ಲಿ ಬಹುಕೋಟಿ ಹಗರಣ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಕಲ್ಯಾಣ ಕಾರ್ಯಕ್ರಮ ಅನುಷ್ಠಾನದಲ್ಲಿ ಈ ಹಗರಣ ನಡೆದಿತ್ತು. ಫಲಾನುಭವಿಗಳ ಹಣವನ್ನು ಸೊಸೈಟಿ ಗಳಿಗೆ ವರ್ಗಾಯಿಸಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿತ್ತು. ಡಿವೈಎಸ್ಪಿ ಸುನಿಲ್ ವೈ ನಾಯಕ್ ನೇತೃತ್ವದಲ್ಲಿ 8 ತಂಡಗಳಾಗಿ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: CM Siddaramaiah: ಲೋಕಾಯುಕ್ತ ಕಚೇರಿಗೆ ಖಾಸಗಿ ಕಾರಿನಲ್ಲಿ ತೆರಳಿದ ಸಿಎಂ, ವಿಚಾರಣೆಯಲ್ಲಿ ಏನಾಯ್ತು?