Wednesday, 11th December 2024

ಲಾರಿಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯ ಉರುಳಿದ ಗುಜರಿ ಹೊತ್ತೊಯ್ಯುತ್ತಿದ್ದ ಲಾರಿ

ಆನೇಕಲ್: ಮುಂದೆ ಚಲಿಸುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಡಿವೈಡರ್ ಹತ್ತಿ ರಸ್ತೆ ಮಧ್ಯೆ ಉರುಳಿದ ಘಟನೆ ತಾಲ್ಲೂಕಿನ ಅತ್ತಿಬೆಲೆ ಸಮೀಪ ನಡೆದಿದೆ.

ಗುಜರಿ ಸಾಮಾನುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಗುಜರಿ ವಸ್ತುಗಳು ಬಿದ್ದಿದ್ದು, ಬೆಂಗಳೂರು-ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ತಮಿಳುನಾಡು ಕಡೆ ಸಂಚರಿಸುವ ರಸ್ತೆ ಸಂಪೂರ್ಣ ಜಾಮ್ ಆಗಿತ್ತು. ವಾಹನ ಸವಾರರು ಹಾಗೂ ಪ್ರಯಾಣಿ ಕರು ಗಂಟೆಗಟ್ಟಲೆ ಪರದಾಡುವಂತಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಅತ್ತಿಬೆಲೆ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಲಾರಿ ಯನ್ನು ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.