ಬೆಳಗಾವಿ: ಬೆಳಗಾವಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು (Mahatma Gandhi statue) ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಉದ್ಘಾಟಿಸಿದರು.
ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೊ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿದರು.
ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ… pic.twitter.com/goIqCsDKUe
— Siddaramaiah (@siddaramaiah) December 26, 2024
ಈ ಸುದ್ದಿಯನ್ನೂ ಓದಿ | Congress session: ಬೆಳಗಾವಿಯಲ್ಲಿ ಕಾಶ್ಮೀರದ ತಿರುಚಿದ ನಕ್ಷೆ ಪ್ರದರ್ಶಿಸಿ ಕಾಂಗ್ರೆಸ್ ಅಗೌರವ: ಬಿಜೆಪಿ ಆರೋಪ
ಹುತಾತ್ಮ ಯೋಧರ ಪಾರ್ಥಿವ ಶರೀರಗಳಿಗೆ ಪುಷ್ಪ ನಮನ
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಹುಬ್ಬಳ್ಳಿ: ನಗರದ ಉಣಕಲ್‌ನ (Hubballi news) ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ (Cylinder Blast) ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು.