Thursday, 19th September 2024

Mandya Violence: ನಾಗಮಂಗಲ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

Mandya Violence

ಮಂಡ್ಯ: ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹೀಗಾಗಿ ಪಟ್ಟಣದಲ್ಲಿ (Mandya Violence) ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆ.14ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರಿಗೆ ನಾಗಮಂಗಲ ಪ್ರವೇಶಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಲಭೆ ವೇಳೆ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಿ, 6 ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 52 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಅಮಾನತು

ಮಂಡ್ಯ : ಗಣೇಶ ವಿಸರ್ಜನೆ (Ganesha procession) ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ (Mandya Violence, nagamangala violence) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ಅಮಾನತು (Mandya news) ಮಾಡಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೃಷ್ಟಿಯಾದ ಗಲಭೆ ರಾತ್ರಿ ವಿಕೋಪಕ್ಕೆ ಹೋಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, 52 ಮಂದಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Eid Milad:‌ ಈದ್​ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಸೌಂಡ್, ಹರಿತ ಆಯುಧ ನೋ ನೋ! ಪೊಲೀಸ್‌ ಸೂಚನೆ

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಇದರಲ್ಲಿ 30 ಮುಸ್ಲಿಮರು ಹಾಗೂ 22 ಹಿಂದುಗಳು ಇದ್ದಾರೆ.