Wednesday, 25th December 2024

Maternal Deaths: ಬಳ್ಳಾರಿಯಲ್ಲಿ ಮುಂದುವರಿದ ಬಾಣಂತಿ ಸಾವಿನ ಸರಣಿ, ಸಾವಿನ ಸಂಖ್ಯೆ 5ಕ್ಕೇರಿಕೆ

vims bellary

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (Bellary news) ಗುರುವಾರ ಮತ್ತೊಂದು ಬಾಣಂತಿಯ ಸಾವು (Maternal Deaths) ಸಂಭವಿಸಿದೆ. ಇದರಿಂದಾಗಿ ನವೆಂಬರ್ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ. ಇಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ.

ಕೂಡ್ಲಗಿ ಪಟ್ಟಣದ ಸುಮಯ್ಯ (24) ಎಂಬವರು ಮೃತ ಬಾಣಂತಿ. ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ನಿತ್ಯ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರ ತೊಂದರೆಯಾದ ಹಿನ್ನೆಲೆಯಲ್ಲಿ ಸಾವಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದು ಇದೀಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ ಇಬ್ಬರು ಡಿಸ್ಟಾರ್ಜ್‌ ಆಗಿದ್ದಾರೆ. ಇದಕ್ಕೂ ಮೊದಲು ರೋಜಾ ಎಂಬವರು ನ.20 ರಂದು, ನಂದಿನಿ ಮತ್ತು ಲಲಿತಮ್ಮ ಎಂಬು ವರುನ.12ರಂದು, ಮುಸ್ಕಾನ್ ಎಂಬುವರು 23ರಂದು ಮೃತಪಟ್ಟಿದ್ದರು.

‘ರಿಂಗ‌ರ್’ ಗ್ಲುಕೋಸ್ ಬಳಕೆಗೆ ಬ್ರೇಕ್

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್‌ ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವಿ ದ್ರಾವಣದಿಂದಲೇ ಸಾವು ಸಂಭವಿಸಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕೈಗೊಳ್ಳಲಾಗಿದೆ. ಅನಾಹುತಕ್ಕೆ ದ್ರಾವಣ ಕಾರಣವೇ ಎಂಬ ಬಗ್ಗೆ ಅನರೋಬಿಕ್ ಟೆಸ್ಟ್ ವರದಿ ಬಳಿಕ ಸ್ಪಷ್ಟತೆ ಸಿಗಲಿದೆ. ಮುಂದಿನ ವಾರ ವರದಿ ಬರಬಹುದು ಎಂದಿದ್ದರು.

ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಅಂತಿಮ ವರದಿ ಬಳಿಕವಷ್ಟೇ ಖಚಿತ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದರು. ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಮುಂಜಾಗ್ರತ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನು ರಾಜ್ಯಾದ್ಯಂತ ತಡೆ ಹಿಡಿಯಲಾಗಿದೆ ನೀಡಿದ್ದರು.

ಇದನ್ನೂ ಓದಿ: CM Siddaramaiah: ಬಾಣಂತಿಯರ ಸಾವಿನ ತನಿಖೆಗೆ ತಜ್ಞರ ಸಮಿತಿ ನೇಮಕ