Monday, 16th December 2024

Max Movie: ಕಿಚ್ಚ ಸುದೀಪ್ ಅಭಿನಯದ ʼಮ್ಯಾಕ್ಸ್ʼ ಚಿತ್ರದ ʼLions roarʼ ಹಾಡು ರಿಲೀಸ್

Max Movie

ಬೆಂಗಳೂರು: ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರಕ್ಕಾಗಿ (Max Movie) ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ʼLions roarʼ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಓರಾಯನ್ ಮಾಲ್‌ನ ಆವರಣದಲ್ಲಿರುವ ಕೆರೆಯಂಗಳದಲ್ಲಿ‌ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. ʼಮ್ಯಾಕ್ಸ್ʼ ಚಿತ್ರದ ಹಾಡಿಗೆ ಹಾಗೂ ಟ್ರೇಲರ್‌ಗೆ ಅಭಿಮಾನಿಗಳು ಫಿದಾ ಆದರು. ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ ʼಮ್ಯಾಕ್ಸ್ʼ ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ‌. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ಸುದೀಪ್.

ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ‌ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು.

ಈ ಸುದ್ದಿಯನ್ನೂ ಓದಿ | Men’s Styling Tips: ಪ್ರತಿ ಪುರುಷರ ಆಕರ್ಷಕ ಲುಕ್‌ಗೆ ಸಾಥ್ ನೀಡುವ 5 ಸಿಂಪಲ್ ಅಂಶಗಳಿವು!

ಸಿನಿಮಾದ ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.