Friday, 13th December 2024

ಮೇಕೆದಾಟು ಯೋಜನೆ ಪ್ರಾರಂಭಿಸಿ : ಶಿವರಾಮೇಗೌಡ

ಬೆಂಗಳೂರು/ರಾಯಚೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಅವರ ನಿವಾಸದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಶಿವರಾಮೇಗೌಡರ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಅತಿ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಬೇಕೆಂದು ಹಾಗೂ ಕಳಸಾ ಬಂಡೂರಿ ಯೋಜನೆ ಕಾಮಗಾರಿ ಶೀಘ್ರವೇ ಜಾರಿಗೊಳಿಸಬೇಕು ಹಾಗೂ ರೈತರ ಹಿತಾಸಕ್ತಿ ಕಾಪಾಡಬೇಕೆಂದು ಎಂದು ಕ.ರ.ವೇ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ಅವರು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮನವಿ ಸಲ್ಲಿಸಿದರು.

ಇದೇ ವೇಳೆ, ನೂತನ ಸಚಿವರುಗಳಾದ ವೈದ್ಯಕೀಯ ಸಚಿವ ಸುಧಾಕರ್ ಅವರು, ವಸತಿ ಸಚಿವ ಸೋಮಣ್ಣ, ಸಹಕಾರ ಸಚಿವ ಸೋಮಶೇಖರ್ ರವರು ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡಪರ ಹೋರಾಟಗಾರರ ವೇದಿಕೆ ವತಿಯಿಂದ ಶುಭಾಶಯಗಳನ್ನು ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.